ಪುತ್ತೂರಿನ ಖಾಸಗಿ ಕಾಲೇಜ್ ದಶಮಾನೋತ್ಸವದಲ್ಲಿ ವಿದ್ಯಾರ್ಥಿಯಿಂದ ದೈವನರ್ತನ: ದೈವಾರಾಧಕರ ಆಕ್ರೋಶ

ಮಂಗಳೂರು: ಪುತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ದಶಮಾನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ದೈವನರ್ತನ ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.
ವೇದಿಕೆ ಮೇಲೆ ವಿದ್ಯಾರ್ಥಿಯೊಬ್ಬ ಜುಮಾದಿ ದೈವದ ವೇಷ ಧರಿಸಿ ನರ್ತನ ಮಾಡಿದ್ದಾನೆ. ಇದು ದೈವಾರಾಧಕರ ಅಸಮಾಧಾನಕ್ಕೆ ಕಾರಣವಾಗಿದೆ. ದೈವನರ್ತನದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದೈವಕ್ಕೆ ಅಪಮಾನ ಮಾಡಲಾಗಿದೆ ಎಂದು ಕಾಲೇಜಿನ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.
ಸಿನಿಮಾಗಳಿಂದ ಯುವಕರು ಪ್ರೇರಣೆ ಪಡೆದು ಇಂತಹ ಕಾರ್ಯಕ್ಕೆ ಮುಂದಾಗಿದ್ದಾರೆ. ಇದು ಸರಿಯಾದ ನಡೆಯಲ್ಲ. ಈ ಹಿಂದೆ ಸಹ ಇಂತಹ ಘಟನೆಗಳು ನಡೆದಾಗ ಎಚ್ಚರಿಕೆ ನೀಡಲಾಗಿತ್ತು. ಆದರೂ ಸಹ ದೈವಗಳಿಗೆ ಅಪಮಾನ ಮಾಡುವುದು ಮುಂದುವರಿದಿದೆ. ಕಾಲೇಜಿನ ವಿರುದ್ಧ ದೂರು ಕೊಡುತ್ತೇವೆ ಎಂದು ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.