ಕಾರು ಚಾಲನೆ ಮಾಡುವಾಗಲೇ ಹೃದಯಘಾತ: ಗುತ್ತಿಗೆದಾರ ಸುರೇಶ್ ಪೈ ಸಾವು

ದಾವಣಗೆರೆ: ಕಾರು ಚಾಲನೆ ಮಾಡುವಾಗಲೇ ಹೃದಯಘಾತದಿಂದ ಪ್ರಥಮ ದರ್ಜೆ ಗುತ್ತಿಗೆದಾರ ಸಾವಿಗೀಡಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತರನ್ನು ನಗರದ ಬನಶಂಕರಿ ಬಡಾವಣೆ ನಿವಾಸಿ ಸುರೇಶ್ ಪೈ ಎಂದು ಗುರುತಿಸಲಾಗಿದೆ. ನಗರದ ಬಿಐಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡಿಕೊಂಡು ಬರುವಾಗ ಅವರಿಗೆ ಹೃದಯಾಘಾತವಾಗಿದೆ.
ಈ ವೇಳೆ ಕಾರು ರಸ್ತೆಯ ಪಕ್ಕದಲ್ಲಿರುವ ಕಾಂಪೌಂಡ್‌ಗೆ ಡಿಕ್ಕಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಆದರೆ ಏನು ಪ್ರಯೋಜನವಾಗಿಲ್ಲ.