ಮನೆ ಕಳ್ಳತನ: ಆರೋಪಿ ಸಹಿತ ನಗದು, 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಆಲೂರು: ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಆಲೂರು ಪೊಲೀಸ್ ಠಾಣೆಯ ಪೊಲೀಸರು ಮತ್ತು ಸಕಲೇಶಪುರ ಡಿವೈಎಸ್ಪಿ ಕಚೇರಿಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಬಂಧಿತನಿಂದ 58,555 ನಗದು ಹಣ ಮತ್ತು 25 ಲಕ್ಷ ಬೆಲೆಬಾಳುವ 284.74 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಹಾಸನದ ವಿಜಯನಗರ ಬಡಾವಣೆಯ ನಿವಾಸಿ ಕಾನೂನು ಸಂಘರ್ಷಕ್ಕೊಳಗಾದ ಸೈಯದ್ ಸಾಧಿಕ್ ಬಂದಿತ ಆರೋಪಿಯಾಗಿದ್ದಾನೆ.
ಕಳೆದ ಕೆಲವು ತಿಂಗಳುಗಳಿಂದ ಆಲೂರು ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಮನೆಯಲ್ಲಿ ಹಗಲು ರಾತ್ರಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣಗಳು ಆಲೂರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ವರದಿಯಾಗಿದ್ದವು.