ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ ಕರೆ

ಧಾರವಾಡ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರ ಉಚ್ಛಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ಹೇಳಿದರು.