ನಂದಿನಿ ಹಾಲಿನ ದರ 4 ರೂ. ಹೆಚ್ಚಳ: ಮಾ.28ರಿಂದಲೇ ಪರಿಷ್ಕೃತ ದರ ಜಾರಿ
ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ ಏರಿಕೆಯ ಬಿಸಿ ಮುಟ್ಟಿಸಿದೆ.
ಪ್ರತಿ ಲೀಟರ್ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ (ಮಾ.28) ಪರಿಷ್ಕೃತ ದರ ಜಾರಿಯಾಗಲಿದೆ.




