ಮಡಿಕೇರಿ: ಎಮ್ಮೆಮಾಡು ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟ: ಮೂವರು ಆರೋಪಿಗಳ ಬಂಧನ
ಮಡಿಕೇರಿ: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಸಾಧಿಕ್ ಎಂ.ಹೆಚ್ (30), ಅಶ್ರಫ್ ಕೆ.ಎಂ (44) ಹಾಗೂ ಸರ್ಫುದ್ದೀನ್ (24) ಬಂಧಿತ ಆರೋಪಿಗಳು.
ಆರೋಪಿಗಳ ಬಳಿಯಿಂದ 10.37 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.





