ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 3ನೇ ಆರೋಪಿಯ ಬಂಧನ

ಬಳ್ಳಾರಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ.
ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಲಾಕ್ ಆಗಿದ್ದಾನೆ.
ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆಗಿದೆ.