ಮಂಗಳೂರು: ವಿದ್ಯಾರ್ಥಿಗಳಿಗೆ ಹೈಡ್ರೋವೀಡ್ ಗಾಂಜಾ, ಚರಸ್: 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸಹಿತ ಯುವಕರಿಬ್ಬರ ಬಂಧನ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಪಾಂಡೇಶ್ವರದ ಸುಭಾಷ್ ನಗರದ ತೈಸಿರ್ ಇಸ್ಮಾಯಿಲ್ ಹುಸೈನ್(23), ಪಾಣೆ ಮಂಗಳೂರಿನ ಬಂಟ್ವಾಳದ ಬೋಳಂಗಡಿ ಹೌಸ್ನ ರೋಯಸ್ಟನ್ ಕ್ಸವಿಯರ್ ಲೋಬೋ (22), ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 8,00,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ,ಚರಸ್ ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ ರೂ. 9 ಲಕ್ಷ ರೂ. ಅಂದಾಜಿಸಲಾಗಿದೆ.
ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.