ಹೆಣ್ಣಿನ ವಿಚಾರಕ್ಕೆ ಗಲಾಟೆಯಲ್ಲಿ ಮೂವರ ಕೊಲೆ: ಇಬ್ಬರು ಆರೋಪಿಗಳ ಬಂಧನ

ಆನೇಕಲ್: ಹೆಣ್ಣಿನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆದ ಮೂರು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್ಮೆಂಟ್‌ನಲ್ಲಿ ಮೂವರ ಬರ್ಬರ ಹತ್ಯೆಯಾಗಿತ್ತು.
ಬಿಹಾರ ಮೂಲದ ಅನ್ಶು (20), ರಾಧೆಶ್ಯಾಮ್ (20), ದೀಪು (18) ಮೃತಪಟ್ಟಿದ್ದರು. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳಾದ ಸೋನು ಮತ್ತು ಸುಧೀರ್ ಇಬ್ಬರನ್ನ ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.