March 19, 2026

ಮನೆಯಲ್ಲಿ ಅಡಿಕೆ ಸುಲಿಯುವ ಮಷಿನ್‌ಗೆ ಸೀರೆ ಸಿಲುಕಿ ಮಹಿಳೆ ಸಾವು

0
image_editor_output_image1292021573-1743332648505.jpg

ಬೆಂಗಳೂರು: ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗಾಗ್ತಿದೆ ಎಂದು ಉಸ್ತುವಾರಿವಹಿಸಿ ನೋಡಲು ಹೋದಾಗ, ಮಷಿನ್‌ಗೆ ಸೀರೆ ಸಿಲುಕಿದ ಹಿನ್ನೆಲೆ ಯಂತ್ರ ತಲೆಗೆ ಬಡಿದಿದೆ. ತೀವ್ರ ರಕ್ತಸ್ರಾವವಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆಯವರ ಹೊಸಬಾಳೆ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ.

ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ದೇಖರೇಖು ನೋಡಿಕೊಳ್ಳುತ್ತಿದ್ದರು. ಆದರೆ, ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಘಟನೆ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರಕನ್ನಡದ ಶಿರಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!