April 8, 2025

ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು

0

ಮಂಡ್ಯ: ಬೆಂಗಳೂರು – ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐರಾವತ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ನಡೆದಿದೆ.

ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತರ ಗುರುತು ಪತ್ತೆ ಆಗಿಲ್ಲ.

ಎಕ್ಸ್​ಪ್ರೆಸ್ ಹೈವೇಯಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್​ಪ್ರೆಸ್ ಹೈವೇಗೆ ಚಾಲಕ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್​​ಆರ್​ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದ್ದು, ಐರಾವತ ಬಸ್ ಡಿಕ್ಕಿ ರಭಸಕ್ಕೆ ಟಾಟಾ ಪಂಚ್​ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

 

 

Leave a Reply

Your email address will not be published. Required fields are marked *

error: Content is protected !!