April 12, 2025

ಮಂಗಳೂರು: ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ ಪ್ರಯಾಣ: ಸ್ಕೂಟರ್ ಸವಾರನಿಗೆ ದಂಡ

0

ಮಂಗಳೂರು: ಸ್ಕೂಟರ್ ಸವಾರನೊಬ್ಬ ಸಂಚಾರ ನಿಯಮಗಳನ್ನು ನಿರ್ಲಕ್ಷಿಸಿ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮಂಗಳೂರು ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ.

ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ ಹೆಲ್ಮೆಟ್ ಧರಿಸದೆ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.

 

 

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಗರದ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿ ಸ್ಕೂಟರ್ ಹಾಗೂ ಸ್ಕೂಟರ್ ಸವಾರನ ಪತ್ತೆ ಹಚ್ಚಿದ್ದಾರೆ. ಸಂಚಾರ ನಿಯಮವನ್ನು ಉಲ್ಲಂಘಿಸಿರುವ ಕೆಎ-19-ಎಚ್‌ಟಿ-1944 ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿದ್ದಾರೆ.

ಬಳಿಕ ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ದ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಹೆಲ್ಮೆಟ್ ಧರಿಸದೇ, ನಂಬ್ರ ಪ್ಲೇಟ್ ಮರೆಮಚಿರುವ ಬಗ್ಗೆ ದೋಷಪೂರಿತ ನಂಬ್ರ ಪ್ಲೇಟ್ ಬಳಕೆ, ನಿರ್ಲಕ್ಷ್ಯತನದ ಚಾಲನೆ, ಡಿ.ಎಲ್ ಇಲ್ಲದೇ ಚಾಲನೆ ಹಾಗೂ ಮೊಬೈಲ್ ಫೋನ್ ಬಳಕೆಯ ಕುರಿತು ರೂಪಾಯಿ 5,500 ರೂ. ದಂಡ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!