December 15, 2025

ಕುಂದಾಪುರ: ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ಸಾವು

0
image_editor_output_image-1021270440-1743999368436.jpg

ಕುಂದಾಪುರ: ಅರಾಟೆ ಸೇತುವೆ ಬಳಿ ಎ.5ರ ಶನಿವಾರ ರಾತ್ರಿ ನಡೆದ ಅಪಘಾತಕ್ಕೆ ಯಕ್ಷಗಾನ ಕಲಾವಿದರೊಬ್ಬರು ಬಲಿಯಾಗಿದ್ದಾರೆ.

ಹಟಿಯಂಗಡಿ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ (40 ) ಮೃತಪಟ್ಟವರು.

ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಮಳೆ ಬಂದ ಕಾರಣದಿಂದ ಅನಿವಾರ್ಯವಾಗಿ ರದ್ದಾಗಿತ್ತು. ಆ ಕಾರಣದಿಂದ ಮೇಳದ ಪ್ರಧಾನ ಮದ್ದಳೆಗಾರ ನಾರಾಯಣ ಪೂಜಾರಿ ಅವರು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು.

ಈ ಸಂದರ್ಭ ಅರಾಟೆ ಸೇತುವೆ ಬಳಿ ದುರಸ್ತಿಗಾಗಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದ್ದು ಗೊಂದಲಕ್ಕೆ ಒಳಗಾದ ನಾರಾಯಣ ಪೂಜಾರಿ ಅವರು ದ್ವಿಮುಖ ಸಂಚಾರ ರಸ್ತೆಯಲ್ಲಿ ಬರುತ್ತಿದ್ದಾಗ ಅಡ್ಡ ಹಾಕಿದ ಮಣ್ಣಿನ ರಾಶಿಗೆ ಗುದ್ದಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!