ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಬ್ಯಾಡ್ಮಿಂಟನ್ ತರಬೇತುದಾರನ ಬಂಧನ
ಬೆಂಗಳೂರು: ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇರೆಗೆ ಬ್ಯಾಡ್ಮಿಂಟನ್ ತರಬೇತುದಾರನನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಸುರೇಶ್ ಬಾಲಾಜಿ(26) ಬಂಧಿತ ತರಬೇತುದಾರ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ಸಂಬಂಧ ಆರೋಪಿಯನ್ನು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.





