December 16, 2025

ಬೆಳ್ತಂಗಡಿ: ಕೂತ್ಲೂರು ಸರಕಾರಿ ಶಾಲೆಯಲ್ಲಿ ಬೆಳೆದ ತರಕಾರಿಗಳನ್ನು ಸಿದ್ದರಾಮಯ್ಯರಿಗೆ ನೀಡಿದ ಮಕ್ಕಳು

0
image_editor_output_image-1042511423-1743999675081.jpg

ಬೆಳ್ತಂಗಡಿ: ಕೃಷಿ ದೇಶದ ಬೆನ್ನೆಲುಬು ಆಗಿ ಆರ್ಥಿಕತೆಗೆ ತನ್ನದೇ ಕೊಡುಗೆ ನೀಡುತ್ತಿರುವಾಗ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಸರಕಾರಿ ಶಾಲೆಗಳಲ್ಲಿ ಕಲಿಕೆಯ ಭಾಗವಾಗಿ ಬೆಳೆಸಿದ ತರಕಾರಿ ಸೇರಿ ಹಣ್ಣು ಹಂಪಲುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಂಭ್ರಮಿಸಿದರು.

ರಾಜಧಾನಿಯ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿಯಾದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲಾ ಆವರಣದಲ್ಲಿ ಬೆಳೆಸಿದ ಹಣ್ಣು ತರಕಾರಿಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಂತಸಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು ಬೆಳೆದ ತರಕಾರಿ, ವಿವಿಧ ಹಣ್ಣು ಹಂಪಲು ಹಾಗೂ ಜೇನು ಕೃಷಿಯ ಬಗ್ಗೆ ಮಾಹಿತಿ ಪಡೆದು ಮಕ್ಕಳ ಕಾರ್ಯವನ್ನು ಶ್ಲಾಘಿಸಿ ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್‌ಗಳ ಉಡುಗೊರೆಯಾಗಿ ಈ ಸಂದರ್ಭದಲ್ಲಿ ನೀಡಿದರು.

Leave a Reply

Your email address will not be published. Required fields are marked *

error: Content is protected !!