ವಿಟ್ಲ: ಹೊರೈಝನ್ ಶಾಲೆಯಲ್ಲಿ ಸಭಾಂಗಣ ಉದ್ಘಾಟನೆ
ವಿಟ್ಲ : ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ನೂತನ ಸಭಾಂಗಣವನ್ನು ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಉದ್ಘಾಟಿಸಿದರು.
ಸದರ್ ಉಮ್ಮರ್ ಸಅದಿ ದುವಾ ನೆರವೇರಿಸಿದರು
ಶಾಲೆಯ ಆಡಳಿತ ಸಮಿತಿ ಅಧ್ಯಕ್ಷ ಅಝೀಝ್ ಸನ, ಕಾರ್ಯದರ್ಶಿ ನೋಟರಿ ಅಬೂಬಕರ್, ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ, ಟ್ರಸ್ಟಿಗಳಾದ ಇಸಾಕ್ ಸಾಹೇಬ್, ಅಬ್ದುಲ್ ಹಮೀದ್ ಬದ್ರಿಯಾ, ಮಸೀದಿ ,ಕೋಶಾಧಿಕಾರಿ ಶರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ಉಪಸ್ಥಿತರಿದ್ದರು. ಉಪ ಮುಖ್ಯ ಶಿಕ್ಷಕಿ ಗಾಯತ್ರಿ ಸ್ವಾಗತಿಸಿದರು.ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ವಂದಿಸಿದರು.




