ವಿಜಯಪುರ: ವೈದ್ಯರೊಬ್ಬರು ಆಸ್ಪತ್ರೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ತಾಳಿಕೋಟೆ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ನಡೆದಿದೆ.
ಸಾಯಿ ಆಸ್ಪತ್ರೆಯ ಡಾ.ರಾಜಶೇಖರ ಮುಚ್ಚಂಡಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಇದೀಗ ವೈದ್ಯರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

