ಹಾಸ್ಟೆಲ್ ರೂಮ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ತಿರುವನಂತಪುರಂ: ಕೇರಳದ ಎರ್ನಾಕುಲಂ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ರೂಮ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತ ಯುವತಿಯನ್ನು ಕಾಸರಗೋಡು ಮೂಲದ ಅಂಬಿಲಿ (25) ಎಂದು ಗುರುತಿಸಲಾಗಿದೆ. ಆಕೆ ಕಲಮಸ್ಸೇರಿಯಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಆಕೆಯ ಸ್ನೇಹಿತೆಯರು ಹಾಸ್ಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.





