March 7, 2026

ಟೊಮ್ಯಾಟೊ ಬೆಲೆ ದಿಢೀ‌ರ್ ಕುಸಿತ: ಕೆಜಿಗೆ 30 ರೂ.ಗೆ ಮಾರಾಟವಾಗುತ್ತಿದ್ದ ಟೊಮ್ಯಾಟೊ ಕೆಜಿಗೆ 2 ರೂ. ಮಾತ್ರ

0
image_editor_output_image829821828-1744178000278.jpg

ಗದಗ: ಟೊಮ್ಯಾಟೊ ಬೆಲೆ ದಿಢೀ‌ರ್ ಕುಸಿತ ಕಂಡಿದ್ದು, ಈ ಬೆಳವಣಿಗೆ ಗದಗ ಜಿಲ್ಲೆಯ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಕೆಜಿಗೆ 30 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಈಗ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಮಾರಾಟವಾಗುತ್ತಿದೆ.

ಪೂರ್ವ ಮುಂಗಾರು ಮಳೆಯ ಪರಿಣಾಮ ಕಳೆದ ವಾರದಿಂದ ಬೆಲೆಗಳು ಕುಸಿಯಲು ಪ್ರಾರಂಭಿಸಿದೆ. ಈ ಬಾರಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಹೆಚ್ಚು ರೈತರು ಟೊಮೆಟೊ ಬೆಳೆದಿದ್ದಾರೆ. ಜತೆಗೆ, ಬಿಸಿಲ ವಾತಾವರಣದಿಂದಾಗಿ ಕಾಯಿಗಳು ಬೇಗ ಹಣ್ಣಾಗುತ್ತವೆ. ಅಲ್ಲದೆ, ಹೊರರಾಜ್ಯಗಳಲ್ಲೂ ಟೊಮೆಟೊ ಹೆಚ್ಚಾಗಿ ಬೆಳೆದಿರುವುದರಿಂದ ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಹಣ್ಣು ರವಾನೆಯಾಗುತ್ತಿಲ್ಲ. ಹೀಗಾಗಿ, ಮಾರುಕಟ್ಟೆಗೆ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದು ಬೇಡಿಕೆಯಿಲ ಬೆಲೆಗಳು ಕುಸಿದಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!