ಪ್ರವಾದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲು
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ.
ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬವರು ದೂರು ದಾಖಲಿಸಿದ್ದರು.




