March 7, 2026

ಉಡುಪಿ: ಇಬ್ಬರು ಸಹೋದರಿಯರು ನಾಪತ್ತೆ

0
image_editor_output_image1114917205-1744211367889.jpg

ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ಸವಾಗಿರುತ್ತಾರೆ.

ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಹತ್ತನೇ ತರಗತಿ ವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯಲ್ಲಿಯೇ ಇರುತ್ತಾರೆ. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!