ಚಿಕ್ಕಮಗಳೂರು: 30 ಅಡಿ ಪ್ರಪಾತಕ್ಕೆ ಉರುಳಿದ KSRTC ಬಸ್
ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಘಟನೆ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಬಸ್ ಬಿದ್ದ ಪರಿಣಾಮ ಪುಟ್ಟಪ್ಪ ಪೂಜಾರಿ ಅವರಿಗೆ ಸೇರಿದ ಮನೆ ಸಂಪೂರ್ಣ ಜಖಂಗೊಂಡಿದೆ. ಬಸ್ನಲ್ಲಿ 60 ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಬೆಂಗಳೂರು ಡಿಪೋಗೆ ಸೇರಿದೆ.




