ಲಾರಿ, ಬೈಕ್, ಆಂಬುಲೆನ್ಸ್ ನಡುವೆ ಸರಣಿ ಅಪಘಾತ: ಬೈಕ್‌ನಲ್ಲಿದ್ದ ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವು
ವಿಜಯಪುರ: ಲಾರಿ, ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಎನ್‌ಎಚ್ 50ರಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಮೌನೇಶ ರಾಠೋಡ್(35) ಮೃತ ಯೋಧ. ಲಾರಿ ಬೈಕ್‌ಗೆ ಡಿಕ್ಕಿಯಾದ ಬಳಿಕ ಬೈಕ್ ಸಮೇತ ಎಳೆದುಕೊಂಡು ಎದುರಿಗೆ ಬರುತ್ತಿದ್ದ ಅಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಅಂಬುಲೆನ್ಸ್ ಚಾಲಕ ಕೇರಳ ಮೂಲದ ರಿತೇಶ್ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ.
ಕ್ರೇನ್ ಮೂಲಕ ಲಾರಿ ಹಾಗೂ ಅಂಬುಲೆನ್ಸ್ ಅನ್ನು ಬೇರ್ಪಡಿಸಿ ಚಾಲಕ ರಿತೇಶ್‌ನನ್ನ ಪೊಲೀಸರು ಹೊರ ತೆಗೆದಿದ್ದಾರೆ. ಗಾಯಾಳು ರಿತೇಶ್‌ನನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ




