ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ

ಪಾಟ್ನ: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿಯವರ ಮೊಮ್ಮಗಳನ್ನು ಅವರ ಪತಿಯೇ ಗುಂಡಿಕ್ಕಿ ಹತ್ಯೆಗೈದ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ.
ಹತ್ಯೆಗೀಡಾದ ಮಹಿಳೆಯನ್ನು ಸುಷ್ಮಾ ದೇವಿ ಎಂದು ಗುರುತಿಸಲಾಗಿದೆ. ಹತ್ಯೆಗೀಡಾದ ಮಹಿಳೆಯ ಪತಿ ರಮೇಶ್ ಇಂದು (ಏ.9) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲಸದಿಂದ ಮನೆಗೆ ಹಿಂದಿರುಗಿದ್ದರು. ಈ ವೇಳೆ ಅವರ ನಡುವೆ ಜಗಳ ಪ್ರಾರಂಭವಾಗಿದೆ. ಜಗಳದ ಸಮಯದಲ್ಲಿ ರಮೇಶ್ ಕಂಟ್ರಿ ಪಿಸ್ತೂಲ್ ತೆಗೆದುಕೊಂಡು ಪೂನಂ ಮೇಲೆ ಗುಂಡು ಹಾರಿಸಿದ್ದಾನೆ.
ಈ ವೇಳೆ ಆಕೆ ಸ್ಥಳದ್ಲಲೇ ಸಾವಿಗೀಡಾಗಿದ್ದು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಸುಷ್ಮಾಳ ಸಹೋದರಿ ಪೂನಂ ಕುಮಾರಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಯಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಆನಂದ್ ಕುಮಾರ್, ಆರೋಪಿಯನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅಪರಾಧ ನಡೆದ ಸ್ಥಳದಲ್ಲಿ ವಿಧಿವಿಜ್ಞಾನ ತಂಡ ಮತ್ತು ತಾಂತ್ರಿಕ ತಜ್ಞರು ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.