March 6, 2026

ಪೊಲೀಸ್ ವಾಹನ, ಬೈಕ್ ನಡುವೆ ಅಪಘಾತ: ಬೈಕ್‌ ಸವಾರ ಸಾವು

0
image_editor_output_image-715292131-1744260353076.jpg

ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಚಲಾಯಿಸುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಹಾಸನದ ಬಿ‌.ಎಂ ರಸ್ತೆಯಲ್ಲಿ ನಡೆದಿದೆ.‌

ಮೃತ ಯುವಕನನ್ನು ಶಶಾಂಕ್ (21) ಎಂದು ಗುರುತಿಸಲಾಗಿದೆ. ವೇಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬಿಎಂ ರಸ್ತೆಯಲ್ಲಿ ಪೊಲೀಸ್‌ ವಾಹನಕ್ಕೆ ಡಿಕ್ಕಿಯಾಗಿ ಆತ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಅವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.‌ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!