ಪುತ್ತೂರು: ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಿದಾ ಹಲೀಮ ಗೆ 591 ಅಂಕ
ಉಪ್ಪಿನಂಗಡಿ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪುತ್ತೂರು ಫಿಲೋಮಿನಾ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಿದಾ ಹಲೀಮ 591 ಅಂಕಗಳನ್ನು ಪಡೆದು ರಾಜ್ಯದಲ್ಲಿ 9ನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.
ಇವರು ಮೂಲತ ಕೆಮ್ಮಾರ ನಿವಾಸಿ, ಪ್ರಸ್ತುತ ಉಪ್ಪಿನಂಗಡಿಯಲ್ಲಿ ವಾಸವಿರುವ ಮೊಹಮ್ಮದ್ ಅಲಿ ಮತ್ತು ರಕಿಯಾ ಪಿ.ಬಿ ದಂಪತಿಯ ಪುತ್ರಿಯಾಗಿದ್ದಾರೆ.




