March 5, 2026

ಉಪ್ಪಿನಂಗಡಿ: ಕಲ್ಲೇರಿ ಎಂಬಲ್ಲಿ ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನ

0
image_editor_output_image1076554729-1744285391322.jpg

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಎಟಿಎಂ ಕೇಂದ್ರವಿದ್ದು, ಇಲ್ಲಿಗೆ ನುಗ್ಗಿದ ಕಳ್ಳರು ಅಲ್ಲಿನ ಸಿಸಿ ಕೆಮರಾವನ್ನು ಕಿತ್ತೆಸೆಯಲು ಪ್ರಯತ್ನಿಸಿದ್ದಾರೆ. ಎಟಿಎಂ ಮೆಷಿನ್ ಅನ್ನು ತೆರೆಯಲು ಯತ್ನಿಸಿದ್ದಾರೆ.

ಈ ಬಗ್ಗೆ ಇಂಡಿಯಾ ವನ್ ಕಾಲ್ ಸೆಂಟರ್‌ನಿಂದ ಕಲ್ಲೇರಿಯ ಎಟಿಎಂ ಕೇಂದ್ರದಲ್ಲಿ ಯಾವುದೋ ಅನುಚಿತ ಕೃತ್ಯ ನಡೆಯುತ್ತಿದೆ ಎಂಬ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕಳವು ಯತ್ನ ಪ್ರಕರಣ ನಡೆದಿರುವುದು ಕಂಡುಬಂದಿತ್ತು. ಈ ಬಗ್ಗೆ ಪ್ರಶಾಂತ್ ಡಿ’ಕೋಸ್ಟಾ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!