March 5, 2026

ಪಿಯುಸಿ ಫಲಿತಾಂಶ: ತುಂಬೆ ಕಾಲೇಜಿಗೆ ಉತ್ತಮ ಫಲಿತಾಂಶ

0
image_editor_output_image-91047363-1744299279125

ಬಂಟ್ವಾಳ: 2024-25 ರ ಶೈಕ್ಷಣಿಕ ಸಾಲಿನಲ್ಲಿ 93% ದೊಂದಿಗೆ ತುಂಬೆ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿರುತ್ತದೆ.


ವಿಜ್ಞಾನ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದವರಲ್ಲಿ 63 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮೊಹಮ್ಮದ್ ಸಿನಾನ್ 568 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದು ,11 ಮಂದಿ ಡಿಸ್ಟಿಂಕ್ಶನ್,46 ಮಂದಿ ಫಸ್ಟ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿರುತ್ತಾರೆ.ವಾಣಿಜ್ಯ ವಿಭಾಗದಲ್ಲಿ 68 ಮಂದಿ ಹಾಜರಾಗಿ 63 ವಿದ್ಯಾರ್ಥಿಗಳು ತೇರ್ಗಡೆಯಾಗಿ  ವಿದ್ಯಾರ್ಥಿನಿ ಕು.ನಮ್ರತಾ
547 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ನಾಲ್ಕು ಡಿಸ್ಟಿಂಕ್ಶನ್,34 ವಿದ್ಯಾರ್ಥಿಗಳು  ಫಸ್ಟ್ ಕ್ಲಾಸ್ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಹಾಗೂ ಕಲಾ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿ 6 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಹಾಗೂ ಕು.ಮೆಹರುನ್ನೀಸಾ 493 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.


ಕಾಲೇಜಿನ ಒಟ್ಟು ಉತ್ತಮ ಫಲಿತಾಂಶಕ್ಕಾಗಿ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಆಡಳಿತ ಮಂಡಳಿಯವರು ಉಪನ್ಯಾಸಕ ವೃಂದ ಹಾಗು ವಿದ್ಯಾರ್ಥಿಗಳಿಗೆ ಅಭಿನಂದಿಸಿರುತ್ತದೆ ಎಂಬುದಾಗಿ ಪ್ರಾಂಶುಪಾಲರಾದ ವಿ.ಎಸ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!