ಬಂಟ್ವಾಳ, ಮಂಗಳೂರು ಸಹಿತ ವಿವಿಧ ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ ಭಾರೀ ಗಾಳಿ ಮಳೆ: ಅಟೋರಿಕ್ಷಾದ ಮೇಲೆ ಬಿದ್ದ ಮರ
ಮಂಗಳೂರು: ಬಂಟ್ವಾಳ ಸಹಿತ ಮಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭಾರಿ ಗಾಳಿ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಮಳೆ ಸುರಿದಿದ್ದು, ಮಳೆ ಅಬ್ಬರಕ್ಕೆ ಲೆಡಿಹಿಲ್ ಬಳಿ ಅಟೋರಿಕ್ಷಾ ಒಂದರ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದೆ.ನಗರದ ವಿವಿಧೆಡೆ ಶುಕ್ರವಾರ ಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಯಿಂದ ಎಡೆಬಿಡದೆ ವರ್ಷಧಾರೆ ಸುರಿದಿದೆ. ದಿಢೀರ್ ಮಳೆಯಿಂದಾಗಿ ಸಾರ್ವಜನಿಕರು ಹೈರಾಣಾದರು. ದಿನನಿತ್ಯದ ಕೆಲಸಕ್ಕೆ ಹೋಗುವವರು, ವಿದ್ಯಾರ್ಥಿಗಳು ಪರದಾಡುವಂತಾಯಿತು.




