March 5, 2026

ಅನಾರೋಗ್ಯದಿಂದ ಪತ್ನಿ ಸಾವು: ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

0
image_editor_output_image1638666155-1744372279925.jpg

ದಾವಣಗೆರೆ: ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ನಡೆದಿದೆ.

35 ವರ್ಷದ ಉದಯ್ ಎಂಬಾತ ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಎಂಬುವರನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎಂಟು ತಿಂಗಳ ಹಿಂದೆ ಉದಯ್ ಅವರ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿಯನ್ನು ಕಳೆದುಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಉದಯ್ ಇಬ್ಬರು ಮಕ್ಕಳ ಕುತ್ತಿಗೆ ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!