ಹಾಸನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಹಾಸನ ಜಿಲ್ಲೆಯ ಸಂಸದರಾದ ಮಾನ್ಯ ಶ್ರೀ ಶ್ರೆಯಸ್ ಪಟೇಲ್ ರವರಿಂದ ವಿಜ್ಞಾನ ಕಾಲೇಜು ಮೈದಾನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಕೆ.ಎಚ್. ವೇಣುಕುಮಾರ್, ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.