ವಿಟ್ಲದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಉಳ್ಳಾಲ ಸಮೀಪದ ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ ಪೂಜಾರಿ ಎಂದು ಗುರುತಿಸಲಾಗಿದೆ.
ವಿಟ್ಲದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈತ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಅವಿವಾಹಿತನಾಗಿದ್ದ ಈತ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಹಾಗೂ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಳಿಕ ಕುಟುಂಬಕ್ಕೆ ಶವವನ್ನು ಹಸ್ತಾಂತರ ಮಾಡಲಾಗಿದೆ.