ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಹತ್ಯ: ಆರೋಪಿ ಪೊಲೀಸ್ ಗುಂಡೇಟಿಗೆ ಬಲಿ

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ರಿತೇಶ್ ಕುಮಾರ್ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಎದೆಗೆ ಗುಂಡು ತಗುಲಿ ಆರೋಪಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಓರ್ವ ಪಿಎಸ್‌ಐ ಮತ್ತು ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.