December 15, 2025

ಉಪ್ಪಿನಂಗಡಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕೆ ಎಸ್ ಆರ್ ಟಿ ಸಿ ಬಸ್

0
image_editor_output_image-2006269744-1744708486365

ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್‌ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಅವಘಡದಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಉಳಿದಂತೆ ಬಸ್ಸಿನ ಚಾಲಕ ಸಹಿತ 10 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲ್ಯಾಡಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ಸಿನ ಟಯರ್ ಸ್ಪೋಟಗೊಂಡಿದ್ದು, ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!