December 15, 2025

ಮುಂದಿನ ವಿಚಾರಣೆ ವರೆಗೆ ವಕ್ಫ್ ಕಾಯಿದೆಯಲ್ಲಿ ಬದಲಾವಣೆ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

0
105486916.cms_.jpg

ಹೊಸದಿಲ್ಲಿ : ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯಿದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14 ರ ಅಡಿಯಲ್ಲಿ ಕೇಂದ್ರ ಸರಕಾರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ಮೆಹ್ತಾ ಕೇಂದ್ರ ಸರಕಾರ ಈ ಕುರಿತು 7 ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಅವಧಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ಇದೇ ವೇಳೆ ಭರವಸೆ ನೀಡಿದರು.

Leave a Reply

Your email address will not be published. Required fields are marked *

error: Content is protected !!