ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ಹರಿದು ಬರುತ್ತಿರುವ ಜನಸಾಗರ-ಹೆದ್ದಾರಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ
ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ ನಲ್ಲಿ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು, ಜನಸಾಗರವೇ ಹರಿದು ಬರುತ್ತಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.ಕಾನೂನು ಸುವ್ಯವಸ್ಥೆ ಕಾಪಾಡಲು ಎಸ್ಪಿ ಮತ್ತು ಅಡಿಶನಲ್ ಎಸ್ಪಿ ದರ್ಜೆಯ ಐವರು ಅಧಿಕಾರಿಗಳು, 20 ಡಿವೈಎಸ್ ಪಿ, 230 ಇನ್ಸ್ ಪೆಕ್ಟರ್ ಸೇರಿದಂತೆ 2000ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಜತೆಗೆ 20 ಕೆಎಸ್ ಆರ್ ಪಿ ತುಕಡಿ, 20 ಶಸ್ತ್ರಾಸ್ತ್ರ ಪೊಲೀಸ್ ಪಡೆಯನ್ನು ನಿಯೋಜನೆ ಮಾಡಲಾಗಿದೆ.
ಪ್ರತಿಭಟನಾ ಸ್ಥಳವಾದ ಅಡ್ಯಾರ್ ಮಾತ್ರವಲ್ಲದೆ, ನಗರದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾದ ಪ್ರದೇಶಗಳಲ್ಲೂ ತೀವ್ರ ನಿಗಾ ವಹಿಸಲಾಗಿದೆ.





