ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಹೈದರಾಬಾದ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಗಜುಲರಾಮರಂನ ಬಾಲಾಜಿ ಲೇಔಟ್‌ನಲ್ಲಿ ನಡೆದಿದೆ.
ಆಶಿಶ್ ರೆಡ್ಡಿ(8), ಅರ್ಷಿತ್ ರೆಡ್ಡಿ(6) ಎಂಬ ಇಬ್ಬರು ಗಂಡು ಮಕ್ಕಳನ್ನು ತೇಜಸ್ವಿನಿ(33) ತೆಂಗಿನಕಾಯಿ ತುರಿಯುವ ಮಣೆಯಿಂದ ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.





