ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
ಆನೇಕಲ್: ವ್ಯಕ್ತಿಯೊಬ್ಬರು ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಖಾಸಗಿ ಶಾಲೆ ಬಳಿ ನಡೆದಿದೆ.
ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಪ್ರವೀಣ್ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕೆಲ ವ್ಯಕ್ತಿಗಳ ಟಾರ್ಚರ್‌ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದಾರೆ.





