ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆ ಆತ್ಮಹತ್ಯೆ
ಹಾಸನ: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಹರಿಣಾಕ್ಷಿ (40) ಆತ್ಮಹತ್ಯೆಗೆ ಶರಣಾದ ಮಹಿಳೆ. ಹರಿಣಾಕ್ಷಿ 16 ವರ್ಷಗಳ ಹಿಂದೆ ಲಿಂಗಾಪುರ ಗ್ರಾಮದ ಶೇಖರ್ ಜೊತೆ ವಿವಾಹವಾಗಿದ್ದರು. ಪತಿ ತನ್ನ ಪತ್ನಿಯನ್ನು ಸದಾ ಅನುಮಾನದಿಂದ ನೋಡುತ್ತಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
ಎರಡೂ ಕುಟುಂಬಗಳ ಹಿರಿಯರು ಹಲವು ಬಾರಿ ರಾಜಿ ಸಂಧಾನ ಕೂಡ ಮಾಡಿದ್ದರು. ಆದರೂ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಲೇ ಇತ್ತು.





