ಹಾಸನ: ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಪರಿಶೀಲನೆ
ಹಾಸನ ನಗರದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಪರಿಶೀಲನೆ ನಡೆಸಲಾಯಿತು.
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿ ಕಳೆದ ಇಪ್ಪತ್ತು ದಿನಗಳಿಂದ ಆರಂಭವಾಗಿದೆ. ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಲಾಗಿದ್ದು ಯಾವ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು ಎಂದು ಸೂಚನೆ ನೀಡಲಾಯಿತು.
2026ರ ಫೆಬ್ರವರಿ ವೇಳೆಗೆ ರೈಲ್ವೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಮಾರ್ಚ್ ವೇಳೆಗೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ.





