March 13, 2026

ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪದಲ್ಲಿ ಮೂವರ ವಿರುದ್ಧ FIR

0
IMG-20250418-WA0013.jpg

ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಶುಕ್ರವಾರ ಮಂಗಳೂರಿನ ಹೊರವಲಯದ ಅಡ್ಯಾರ್‌ನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪದಲ್ಲಿ ಮೂವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯಲ್ಲಿ ನೇರ ವೀಕ್ಷಣೆ ಮತ್ತು ಪ್ರಾಥಮಿಕ ವೀಡಿಯೊ ವಿಶ್ಲೇಷಣೆಯ ಆಧಾರದ ಮೇಲೆ ಕೃಷ್ಣಾಪುರದ ನಿವಾಸಿ ಜಲೀಲ್, ವಳಚಿಲ್‌ನ ಫಝಲ್ ಮತ್ತು ಮೊಹಮ್ಮದ್ ಹನೀಫ್ ನೌಫಲ್ ವಿರುದ್ಧ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ದೂರಿನ ಮೇರೆಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಘಟನೆಯಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ವೀಡಿಯೊ ದೃಶ್ಯಗಳ ವಿವರವಾದ ವಿಶ್ಲೇಷಣೆಯ ಆಧಾರದ ಮೇಲೆ ಇತರ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!