ಉಡುಪಿ:ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ರಕರ್ತ ಸಾವು
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು.
ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.





