ಮಂಗಳೂರು: ಅತ್ತಾವರದಲ್ಲಿ ಅವಳಿ ಕೊಲೆ ಪ್ರಕರಣ: ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಮಂಗಳೂರು: ನಗರದ ಅತ್ತಾವರದ ಬಾಡಿಗೆ ಮನೆಯೊಂದರಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
ಕಾಸರಗೋಡು ಜಿಲ್ಲೆಯ ಚೆಂಗಳ ಗ್ರಾ.ಪಂ. ಚೆರ್ಕಳ ಮನೆ ನಿವಾಸಿ ಮೊಹಮ್ಮದ್ ಮುಹಜೀರ್ ಸನಾಫ್ (35), ವಿದ್ಯಾನಗರ ಅಣಂಗೂರು ಟಿ.ವಿ. ಸ್ಟೇಷನ್ ರಸ್ತೆ ನಿವಾಸಿ ಎ. ಮೊಹಮ್ಮದ್ ಇರ್ಷಾದ್ (34) ಮತ್ತು ಎ. ಮೊಹಮ್ಮದ್ ಸಫ್ಘಾನ್ (34) ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಗಳು.
ಕೇರಳದ ತಲಕ್ಕೇರಿಯ ನಾಫೀರ್ (24) ಮತ್ತು ಕೊಯಿಕೋಡ್‌ನ ಫಹೀಮ್ (೨೫) 10 ವರ್ಷಗಳ ಹಿಂದೆ ಕೊಲೆಯಾದವರು.





