ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್
ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.
ಬಳಿಕ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.





