December 15, 2025

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ

0
image_editor_output_image-1513720896-1745220041862.jpg

ಗದಗ: ಪ್ರಿಯಕರನ ಬ್ಲ್ಯಾಕ್‌ಮೇಲ್‌ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ 8 ದಿನ ಬಾಕಿ ಇರುವಾಗಲೇ ಸೈರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಭಾನುವಾರ ಸೈರಾಬಾನು ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಪೇಟೆಗೆ ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 5 ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನನ್ನು ಪ್ರೀತಿ ಮಾಡುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಆಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!