ಹಾಸನ: ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿಯನ್ನು ತುಳಿದು ಕೆಎಸ್‍ಆರ್‌ಟಿಸಿ ನೌಕರರೊಬ್ಬರು ಸಾವಿಗೀಡಾದ ಘಟನೆ ನಗರದ ಬಿಟಿ ಕೊಪ್ಪಲಿನಲ್ಲಿ ನಡೆದಿದೆ.
ಮೃತರನ್ನು ನಂದೀಶ್ (41) ಎಂದು ಗುರುತಿಸಲಾಗಿದೆ. ಅವರು ವಾಕಿಂಗ್ ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿಯಾದಂತಾಗಿದೆ.
