March 22, 2026

ಪಾಣೆಮಂಗಳೂರು: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

0
IMG-20211221-WA0003.jpg

ಪಾಣೆಮಂಗಳೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಆಡಳಿತ ವಿರೋಧಿ ಸುಳ್ಳು ಭರವಸೆಯ ನೀತಿಯಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ತತ್ತ್ವ ಸಿದ್ಧಾಂತ ಹಾಗೂ ಜನಪರ ಕಾಳಜಿಯನ್ನು ಒಪ್ಪಿಕೊಂಡು ಶ್ರೀ ಬಿ ರಮಾನಾಥ ರೈ ಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ವೀರಕಂಬ ಗ್ರಾಮದ ಶ್ರೀನಿವಾಸ ಪೂಜಾರಿ ಹಾಗೂ ಗುರುವ ಮಂಗಲಪದವು ಇವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!