ಉಡುಪಿ: ಜಿಲ್ಲಾ ಮಟ್ಟದ ಇಬ್ಬರು ಹಿರಿಯ ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ
ಉಡುಪಿ : ಜಿಲ್ಲಾ ಮಟ್ಟದ ಇಬ್ಬರು ಹಿರಿಯ ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ರೈತ ಮೋರ್ಚಾ ಜಿಲ್ಲಾಧ್ಯಕ್ಷರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಮಾಜಿ ಜಿಪಂ ಸದಸ್ಯ ಉದಯ ಕೋಟ್ಯಾನ್ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಇವರಿಬ್ಬರು ಉಚ್ಚಾಟಿತ ಬಿಜೆಪಿ ನಾಯಕರು.





