March 13, 2026

ಜನಿವಾರ ವಿವಾದ: ವಿದ್ಯಾರ್ಥಿ ಸುಚಿವ್ರತ್ ಗೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಸೀಟ್: ಸಚಿವ ಈಶ್ವರ ಖಂಡ್ರೆ

0
image_editor_output_image-1405490847-1745247019994.jpg

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ.

ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇಂತಹ ಒಂದು ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!