March 13, 2026

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ ಮಹೇಶ್ ಬಾಬು ಗೆ ಈಡಿ ಸಮನ್ಸ್

0
1427930-mahesh-babu-final.webp

ಹೈದರಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ) ಟಾಲಿವುಡ್ ನಟ ಮಹೇಶ್ ಬಾಬು ಅವರಿಗೆ ಏ.28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ ಅಡಿ ಇಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿತ್ತು. ಈ ಕಂಪನಿಗಳ ಜಾಹೀರಾತಿನಲ್ಲಿ ಮಹೇಶ್ ಬಾಬು ನಟಿಸಿದ್ದರು.

ನಟಿಸಿದ್ದಕ್ಕೆ ಮಹೇಶ್ ಬಾಬು ಅವರಿಗೆ 5.9 ಕೋಟಿ ರೂ. ಕಂಪನಿ ಸಂಭಾವನೆ ನೀಡಿತ್ತು. ಈ ಪೈಕಿ ಮಹೇಶ್ ಬಾಬು ಅವರಿಗೆ 3.4 ಕೋಟಿ ರೂ. ಚೆಕ್ ಮೂಲಕ ಪಾವತಿಸಲಾಗಿದ್ದು, ಇನ್ನುಳಿದ 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ನಟನ ವಿರುದ್ಧ ಇಡಿ ಸಮನ್ಸ್ ಜಾರಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!